Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:7 - ಕನ್ನಡ ಸತ್ಯವೇದವು J.V. (BSI)

7 ಅಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿ ಸಹಭೋಜನಮಾಡಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿ ಸಹಭೋಜನ ಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಅಲ್ಲಿ ಯಜ್ಞವನ್ನರ್ಪಿಸಿ ಸಮಾಧಾನಯಜ್ಞದ ಭೋಜನವನ್ನು ಮಾಡಬೇಕು. ಅಲ್ಲಿ ದೇವರ ಸನ್ನಿಧಾನದಲ್ಲಿ ಊಟ ಮಾಡಿ ಸಂತೋಷಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:7
24 ತಿಳಿವುಗಳ ಹೋಲಿಕೆ  

ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಆತನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ನಿಷ್ಕರ್ಷೆಮಾಡಿದನು.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.


ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಲವಾಗಿಯೂ ಸ್ಪಷ್ಟವಾಗಿಯೂ ಬರಿಸಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು