Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:8 - ಕನ್ನಡ ಸತ್ಯವೇದವು J.V. (BSI)

8 ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಲವಾಗಿಯೂ ಸ್ಪಷ್ಟವಾಗಿಯೂ ಬರಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಳವಾಗಿ ಹಾಗು ಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಆ ಕಲ್ಲುಗಳ ಮೇಲೆ ಈ ಉಪದೇಶಗಳನ್ನೆಲ್ಲ ಸ್ಪಷ್ಟವಾಗಿ ಓದಲು ಸುಲಭವಾದ ರೀತಿಯಲ್ಲಿ ಬರೆಯಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಆ ಕಲ್ಲುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಬಹುಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:8
7 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು - ನಿನಗಾದ ದರ್ಶನವನ್ನು ಬರೆ; ಓದುವವರು ಶೀಘ್ರವಾಗಿ ಓದುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತು.


ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ಅಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿ ಸಹಭೋಜನಮಾಡಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಯಾಜಕರಾದ ಲೇವಿಯರೊಡನೆ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ - ಇಸ್ರಾಯೇಲ್ಯರೇ, ನಿಶಬ್ದವಾಗಿದ್ದು ಕೇಳಿರಿ. ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾದಿರಷ್ಟೆ.


ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಕಬ್ಬಿಣದ ಕಂಠದಿಂದ ಬಂಡೆಯ ಮೇಲೆ ಕೆತ್ತಿ ಸೀಸ ಎರೆದು ಶಾಶ್ವತಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು