Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:10 - ಕನ್ನಡ ಸತ್ಯವೇದವು J.V. (BSI)

10 ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಿಮ್ಮ ದೇಶದಲ್ಲಿ ವಾಸಿಸುವವರೆಲ್ಲರೂ ನೀವು ದೇವರ ಹೆಸರಿನಿಂದ ಕರೆಯಲ್ಪಟ್ಟವರೆಂಬುದನ್ನು ನೋಡುವಾಗ ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಭೂಲೋಕದ ಜನರೆಲ್ಲರೂ, ನೀವು ಯೆಹೋವ ದೇವರ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:10
18 ತಿಳಿವುಗಳ ಹೋಲಿಕೆ  

ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.


ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರುವಂತೆ ಮಾಡಿದನು.


ಹೀಗೆ ಅವರು ಇಸ್ರಾಯೇಲ್ಯರ ಮೇಲೆ ನನ್ನ ಹೆಸರನ್ನು ಉಚ್ಚರಿಸಲಾಗಿ ನಾನು ಅವರನ್ನು ಆಶೀರ್ವದಿಸುವೆನು.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.


ಐಗುಪ್ತ್ಯರು - ನಾವೆಲ್ಲರು ಸಾಯುತ್ತೇವಲ್ಲಾ ಅಂದುಕೊಂಡು ಇಸ್ರಾಯೇಲ್ಯರನ್ನು ತಮ್ಮ ದೇಶದಿಂದ ತ್ವರೆಯಾಗಿ ಕಳುಹಿಸಿಬಿಡುವದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲಾತ್ಕರಿಸಿದರು.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು


ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಇಂದಿನಿಂದ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು ಎಂದು ಹೇಳಿದನು.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು