11 “ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.
ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.
ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.
ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.