Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:2 - ಕನ್ನಡ ಸತ್ಯವೇದವು J.V. (BSI)

2 ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಕೆಳಕಂಡ ಶುಭಗಳೆಲ್ಲ ನಿಮಗೆ ಪ್ರಾಪ್ತವಾಗುವುವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ದೇವರಿಗೆ ವಿಧೇಯರಾದರೆ ಈ ಎಲ್ಲಾ ಆಶೀರ್ವಾದಗಳು ನಿಮ್ಮದಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳಿ ಪಾಲಿಸಿದರೆ, ಈ ಎಲ್ಲಾ ಆಶೀರ್ವಾದಗಳು ನಿಮ್ಮ ಮೇಲೆ ಬಂದು, ನಿಮ್ಮೊಂದಿಗಿರುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:2
7 ತಿಳಿವುಗಳ ಹೋಲಿಕೆ  

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.


ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಶುಭವುಂಟಾಗುವದು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ


ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು ಈ ರೀತಿಯಾಗಿ ಆಶೀರ್ವಾದಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು