Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:21 - ಕನ್ನಡ ಸತ್ಯವೇದವು J.V. (BSI)

21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:21
14 ತಿಳಿವುಗಳ ಹೋಲಿಕೆ  

ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.


ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು.


ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು.


ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.


ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆತನು ಊಟಕ್ಕೆ ಕೂತಿರುವಾಗ ಆ ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.


ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ


ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು