ಧರ್ಮೋಪದೇಶಕಾಂಡ 28:25 - ಕನ್ನಡ ಸತ್ಯವೇದವು J.V. (BSI)25 ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.