Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:29 - ಕನ್ನಡ ಸತ್ಯವೇದವು J.V. (BSI)

29 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:29
26 ತಿಳಿವುಗಳ ಹೋಲಿಕೆ  

ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.


ಅವರು ಹಗಲಿನಲ್ಲಿ ಕತ್ತಲೆಗೊಳಗಾಗಿ ಮಧ್ಯಾಹ್ನದಲ್ಲೂ ರಾತ್ರಿಯಲ್ಲಿರುವಂತೆ ತಡವಾಡುತ್ತಾರೆ.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.


ಇವರು ಆ ವರುಷದಿಂದ ಹದಿನೆಂಟು ವರುಷಗಳವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲ್ಯರನ್ನು ಬಹಳವಾಗಿ ಪೀಡಿಸುತ್ತಾ ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.


ಇಸ್ರಾಯೇಲ್ಯರು ಅವನಿಗೆ ಹದಿನೆಂಟು ವರುಷ ದಾಸರಾಗಿದ್ದರು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ನೀನು ಅವರನ್ನು ಕರೆದುಕೊಂಡು ಹೋಗಿ ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ವ್ರತವನ್ನು ತೀರಿಸಿಕೊಳ್ಳುವದಕ್ಕಾಗಿ ಅವರಿಗೋಸ್ಕರ ಹಣ ವೆಚ್ಚಮಾಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ ನೀನಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ ಎಂತಲೂ ತಿಳುಕೊಳ್ಳುವರು.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ಚೀಯೋನ್ ಪರ್ವತವು ಹಾಳಾಯಿತಲ್ಲಾ! ನರಿಗಳು ಅಲ್ಲಿ ಸಂಚರಿಸುತ್ತವೆ.


ದಾಸರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.


ಅವರು ಬೆಳಕಿಲ್ಲದ ಕತ್ತಲಲ್ಲಿ ತಡವಾಡುವರು. ಅವರನ್ನು ಅಮಲೇರಿದವರಂತೆ ಓಲಾಡಿಸುವನು.


ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು.


ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು.


ಚಿತ್ತಭ್ರಮಣೆ, ಕುರುಡತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸಲು


ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ಆಹಾ, ಆ ಯಾಜಕಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು