Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:44 - ಕನ್ನಡ ಸತ್ಯವೇದವು J.V. (BSI)

44 ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ಶಿರಸ್ಸಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಸಾಲ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅವರು ನಿಮಗೆ ಸಾಲ ಕೊಡುವರು ಆದರೆ ನೀವು ಅವರಿಗೆ ಸಾಲಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಅವರು ನಿಮಗೆ ಶಿರಸ್ಸಾಗುವರು ಆದರೆ ನೀವು ಅವರಿಗೆ ಅಧೀನರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:44
3 ತಿಳಿವುಗಳ ಹೋಲಿಕೆ  

ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಶಿರಸ್ಸಾದರು, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಹಸುಮಕ್ಕಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು