ಧರ್ಮೋಪದೇಶಕಾಂಡ 28:45 - ಕನ್ನಡ ಸತ್ಯವೇದವು J.V. (BSI)45 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 “ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು. ಅಧ್ಯಾಯವನ್ನು ನೋಡಿ |