Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:46 - ಕನ್ನಡ ಸತ್ಯವೇದವು J.V. (BSI)

46 ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಇವು ನಿಮಗೂ ನಿಮ್ಮ ಸಂತತಿಯವರಿಗೂ ನಿರಂತರವಾಗಿ ಪ್ರಾಪ್ತವಾಗುವುವು; ಸರ್ವರಿಗೆ ಬೆರಗನ್ನೂ ಎಚ್ಚರಿಕೆಯನ್ನೂ ಉಂಟುಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಂಬುದಕ್ಕೆ ಬೇರೆಯವರಿಗೆ ಈ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವು ನಿಮ್ಮ ಮೇಲೂ ನಿಮ್ಮ ಸಂತತಿಯ ಮೇಲೂ ಯಾವಾಗಲೂ ಗುರುತೂ ಅದ್ಭುತವೂ ಆಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:46
13 ತಿಳಿವುಗಳ ಹೋಲಿಕೆ  

ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಓಹೋ, ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ ಎಂದೆನ್ನಿಸಿಕೊಂಡು ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತರಲು


ಯೆರೂಸಲೇವಿುಗೂ ಯೆಹೂದದ ಪಟ್ಟಣಗಳಿಗೂ ಅರಸರಿಗೂ ಪ್ರಧಾನರಿಗೂ ಕುಡಿಸಿದೆನು; ಇದರಿಂದ ಅವರು ಹಾಳಾಗಿ ಬೆರಗಿನ ಸಿಳ್ಳಿಗೂ ಶಾಪಕ್ಕೂ ಗುರಿಯಾಗುವದಕ್ಕೆ ಆಸ್ಪದವಾಯಿತು.


ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ಆತನು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುವಿಶೇಷವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.


ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು