Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:48 - ಕನ್ನಡ ಸತ್ಯವೇದವು J.V. (BSI)

48 ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:48
23 ತಿಳಿವುಗಳ ಹೋಲಿಕೆ  

ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು;


ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.


ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು ಎಂದು ಹೇಳಿದನು.


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ತಮ್ಮ ಪಾಪಗಳ ಸಲುವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಎತ್ತಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡುವದಾದರೆ


ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ; ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವದಕ್ಕಾಗದು; ಅದು ಕೆಟ್ಟಕಾಲವೇ ಸರಿ.


ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು.


ಆತನ ಕೈ ನನ್ನ ದ್ರೋಹಗಳನ್ನು ನೊಗದ ಕಣ್ಣಿಗಳನ್ನೋ ಎಂಬಂತೆ ನನಗೆ ಬಿಗಿದಿದೆ. ಅವು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು