ಧರ್ಮೋಪದೇಶಕಾಂಡ 28:50 - ಕನ್ನಡ ಸತ್ಯವೇದವು J.V. (BSI)50 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ಕನಿಕರಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.