ಧರ್ಮೋಪದೇಶಕಾಂಡ 28:53 - ಕನ್ನಡ ಸತ್ಯವೇದವು J.V. (BSI)53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 “ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಎಂಥ ಇಕ್ಕಟ್ಟಿಗೆ ಸಿಕ್ಕಿಸುವರೆಂದರೆ, ನೀವು ನಿಮ್ಮ ಸಂತಾನವನ್ನೇ, ಅಂದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.