ಧರ್ಮೋಪದೇಶಕಾಂಡ 28:54 - ಕನ್ನಡ ಸತ್ಯವೇದವು J.V. (BSI)54-55 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54-55 ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 “ನಿಮ್ಮಲ್ಲಿರುವ ಮೃದುವಾದ ಮತ್ತು ಕನಿಕರವುಳ್ಳ ಮನುಷ್ಯನೂ ಬೇರೆಯವರಿಗೆ ಕ್ರೂರಿಯಾಗುವನು; ತನ್ನನ್ನು ಬಹಳವಾಗಿ ಪ್ರೀತಿಸುವ ಹೆಂಡತಿಗೂ ಅವನು ಕ್ರೂರಿಯಾಗುವನು; ಇನ್ನೂ ಜೀವಂತವಾಗಿರುವ ತನ್ನ ಮಕ್ಕಳಿಗೂ ಅವನು ಕ್ರೂರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಸಹ ತನ್ನ ಸ್ವಂತ ಸಹೋದರ ಅಥವಾ ಅವನು ಪ್ರೀತಿಸುವ ಹೆಂಡತಿ ಅಥವಾ ಉಳಿದಿರುವ ಮಕ್ಕಳ ಮೇಲೆ ಅನುಕಂಪ ತೋರಿಸುವುದಿಲ್ಲ. ಅಧ್ಯಾಯವನ್ನು ನೋಡಿ |