Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:58 - ಕನ್ನಡ ಸತ್ಯವೇದವು J.V. (BSI)

58 ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 “ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 “ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ನಿಮ್ಮ ದೇವರಾದ ಯೆಹೋವ ದೇವರೆಂಬ ಈ ಘನವುಳ್ಳ ಹೆಸರಿಗೆ ನೀವು ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನಿಯಮದ ಮಾತುಗಳನ್ನು ಅಲಕ್ಷಿಸಿ, ತಪ್ಪು ದಾರಿ ಹಿಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:58
27 ತಿಳಿವುಗಳ ಹೋಲಿಕೆ  

ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವರು ಯೆಹೋವನನ್ನು ಅಲ್ಲಗಳೆದು - ಆತನು ಏನು ಮಾಡಿಯಾನು? ನಮಗೆ ಕೇಡುಬಾರದು, ಖಡ್ಗವೂ ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ಆತನು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುವಿಶೇಷವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.


ದೇವರೇ, ನಾವು ನಿನ್ನ ಆಲಯದಲ್ಲಿ ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ ಲೋಕವೆಲ್ಲಾ ನಿನ್ನನ್ನು ಹೊಗಳುವದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.


ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.


ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು