Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:59 - ಕನ್ನಡ ಸತ್ಯವೇದವು J.V. (BSI)

59 ಆತನು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುವಿಶೇಷವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ನಿಮಗೂ ನಿಮ್ಮ ಸಂತತಿಯವರಿಗೂ ಅನೇಕ ತೊಂದರೆಗಳನ್ನು ಕೊಡುವನು. ಆ ತೊಂದರೆಗಳು ಮತ್ತು ರೋಗಗಳು ಭಯಂಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಯೆಹೋವ ದೇವರು ನಿಮಗೂ ನಿಮ್ಮ ಸಂತತಿಗೂ ಭಯಂಕರವಾದ ಉಪದ್ರವಗಳನ್ನು ಬರಮಾಡುವರು; ಅವು ಕಠಿಣವಾದ ಮತ್ತು ದೀರ್ಘಕಾಲದ ಬಾಧೆಗಳೂ ಘೋರವಾದ ಮತ್ತು ಗಂಭೀರವಾದ ರೋಗಗಳಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:59
16 ತಿಳಿವುಗಳ ಹೋಲಿಕೆ  

ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


[ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ವೈರಿಗಳೂ ವಿರೋಧಿಗಳೂ ಯೆರೂಸಲೇವಿುನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಭೂಪತಿನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ


ನೀವು ಅಂಜಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರಿಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಹತ್ತಿಕೊಂಡೇ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು