ಧರ್ಮೋಪದೇಶಕಾಂಡ 28:63 - ಕನ್ನಡ ಸತ್ಯವೇದವು J.V. (BSI)63 ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು. ಅಧ್ಯಾಯವನ್ನು ನೋಡಿ |
ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.