ಧರ್ಮೋಪದೇಶಕಾಂಡ 28:9 - ಕನ್ನಡ ಸತ್ಯವೇದವು J.V. (BSI)9 ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಗಳನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.
ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.