ಧರ್ಮೋಪದೇಶಕಾಂಡ 29:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ: ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.