Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:12 - ಕನ್ನಡ ಸತ್ಯವೇದವು J.V. (BSI)

12-13 ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:12
14 ತಿಳಿವುಗಳ ಹೋಲಿಕೆ  

ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವದಾಗಿ ಆತನಿಗೆ ಪ್ರಮಾಣಮಾಡಿದರು. ಇದಲ್ಲದೆ ರಾಜಪ್ರಜೆಗಳಿಗೂ ಒಡಂಬಡಿಕೆಯಾಯಿತು.


ಹೀಗೆ ಯೆಹೋಶುವನು ಶೆಕೆವಿುನಲ್ಲಿ ಇಸ್ರಾಯೇಲ್ಯರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ನ್ಯಾಯವಿಧಿಗಳನ್ನು ನೇವಿುಸಿದನು.


ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.


ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,


ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಅಹಾರವಾಗಲೆಂದು ಯಜ್ಞಮಾಡಿದಿ.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ನಮಗೆ ಯೆಹೋವನೇ ದೇವರಾಗಿರುವನೆಂದೂ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಆತನ ಮಾತಿಗೆ ಲಕ್ಷ್ಯವಿಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.


ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು