ಧರ್ಮೋಪದೇಶಕಾಂಡ 29:19 - ಕನ್ನಡ ಸತ್ಯವೇದವು J.V. (BSI)19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು. ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.