ಧರ್ಮೋಪದೇಶಕಾಂಡ 29:22 - ಕನ್ನಡ ಸತ್ಯವೇದವು J.V. (BSI)22 ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿ ಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.