ಧರ್ಮೋಪದೇಶಕಾಂಡ 29:29 - ಕನ್ನಡ ಸತ್ಯವೇದವು J.V. (BSI)29 ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ. ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ರಹಸ್ಯಗಳು ನಮ್ಮ ದೇವರಾದ ಯೆಹೋವ ದೇವರಿಗೆ ಸೇರಿದ್ದು, ಆದರೆ ಪ್ರಕಟವಾದ ಈ ನಿಯಮದ ಮಾತುಗಳನ್ನೆಲ್ಲಾ ನಾವು ಕೈಕೊಳ್ಳುವ ಹಾಗೆ ನಮಗೂ, ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ. ಅಧ್ಯಾಯವನ್ನು ನೋಡಿ |