Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:10 - ಕನ್ನಡ ಸತ್ಯವೇದವು J.V. (BSI)

10 ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕವಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:10
10 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಅರ್ಧಭಾಗವೂ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬದ ಸಮುದ್ರದವರೆಗೆ ಯೊರ್ದನ್ ಹೊಳೆಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.)


ಇಸ್ರಾಯೇಲ್ಯರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು.


ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ.


ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ, ಆ ತಗ್ಗಿನ ಮಧ್ಯದಲ್ಲಿದ್ದ ಪಟ್ಟಣ ಇವುಗಳೂ


ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದ ಗಾದ್ ಕುಲದವರು - ಪ್ರಧಾನನಾದ ಯೋವೇಲ,


ಯಾಯೀರನ ಗ್ರಾಮಗಳೆನಿಸಿಕೊಳ್ಳುವ ಅರುವತ್ತು ಊರುಗಳು ಇದರಲ್ಲೇ ಇರುತ್ತವೆ.


ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು