ಧರ್ಮೋಪದೇಶಕಾಂಡ 3:2 - ಕನ್ನಡ ಸತ್ಯವೇದವು J.V. (BSI)2 ಆಗ ಯೆಹೋವನು ನನಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತಜನರನ್ನೂ ದೇಶವನ್ನೂ ನಿನ್ನ ಕೈವಶ ಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು. ಅಧ್ಯಾಯವನ್ನು ನೋಡಿ |