Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:21 - ಕನ್ನಡ ಸತ್ಯವೇದವು J.V. (BSI)

21 ಆ ಕಾಲದಲ್ಲಿ ನಾನು ಯೆಹೋಶುವನಿಗೆ - ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ಹೊಳೇ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:21
11 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ಆಗ ಅವನು ಅವರಿಗೆ - ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿರ್ರಿ, ಧೈರ್ಯದಿಂದಿರ್ರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು ಎಂದು ಹೇಳಿದನಂತರ


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು.


ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಕಡೆಯವನಾಗಿ ಯುದ್ಧಮಾಡುವನು ಎಂದು ಆಜ್ಞಾಪಿಸಿದೆನು.


ನೀವು ಆಗ ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು