Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:4 - ಕನ್ನಡ ಸತ್ಯವೇದವು J.V. (BSI)

4 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಮಯದಲ್ಲಿ ಓಗನಿಗೆ ಸೇರಿದ್ದ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡೆವು. ಬಾಷಾನಿನಲ್ಲಿ ಓಗನ ರಾಜ್ಯದಲ್ಲಿರುವ ಅರ್ಗೋಬ್ ಪ್ರದೇಶದಲ್ಲಿ ಅರವತ್ತು ಪಟ್ಟಣಗಳು ನಮ್ಮ ವಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:4
10 ತಿಳಿವುಗಳ ಹೋಲಿಕೆ  

ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರುವತ್ತು ಪಟ್ಟಣಗಳಿರುವ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದು ರಾಮೋತ್ ಗಿಲ್ಯಾದಿನಲ್ಲಿ ವಾಸವಾಗಿದ್ದ ಗೆಬೆರನ ಮಗನು.


ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು [ಎರಡನೆಯವನು].


ಆದಕಾರಣ ಇಸ್ರಾಯೇಲ್ಯರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಒಬ್ಬರಾದರೂ ಉಳಿಯದಂತೆ ಹತಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.


ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತು ಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.


ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.


ಗಿಲ್ಯಾದಿನ ವಿುಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.


(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು.)


ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಯೊರ್ದನ್ ಹೊಳೆಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಮತ್ತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು