Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:6 - ಕನ್ನಡ ಸತ್ಯವೇದವು J.V. (BSI)

6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿಶ್ಶೇಷವಾಗಿ ನಾಶಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೆಷ್ಬೋನಿನ ಅರಸನಾದ ಸೀಹೋನನಿಗೆ ಸೇರಿದ ಪಟ್ಟಣಗಳನ್ನು ನಾವು ಹೇಗೆ ಧ್ವಂಸ ಮಾಡಿದೆವೋ ಹಾಗೆಯೇ ಈ ಪಟ್ಟಣಗಳನ್ನು ಧ್ವಂಸ ಮಾಡಿ ಸ್ತ್ರೀಯರೂ ಕೂಸುಗಳೂ ಸೇರಿದಂತೆ ಅದರ ನಿವಾಸಿಗಳಲ್ಲಿ ಒಬ್ಬರನ್ನೂ ಬಿಡದೆ ಹತಿಸಿಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:6
12 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತು ಹೋಗಿ ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಿಸಿರಿ.


ಇಸ್ರಾಯೇಲ್ಯರು ಅವುಗಳಲ್ಲಿದ್ದ ಪಶುಗಳನ್ನೂ ವಸ್ತುಗಳನ್ನೂ ಕೊಳ್ಳೆ ಹಿಡಿದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲಮಾಡಿದರು. ಒಂದು ಪ್ರಾಣಿಯನ್ನೂ ಉಳಿಸಲಿಲ್ಲ.


ಆಗ ಯೆಹೋವನು ನನಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತಜನರನ್ನೂ ದೇಶವನ್ನೂ ನಿನ್ನ ಕೈವಶ ಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕೆಂದು ಆಜ್ಞಾಪಿಸಿದನು.


ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು.


ಅಂದರೆ [ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ] ನಾಲ್ವತ್ತನೆಯ ವರುಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಿದನು.


ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.


ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು