Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:9 - ಕನ್ನಡ ಸತ್ಯವೇದವು J.V. (BSI)

9 (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 (ಹೆರ್ಮೋನ್ ಪರ್ವತಕ್ಕೆ ಸಿದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 (ಚೀದೋನಿನ ಜನರು ಹೆರ್ಮೋನ್ ಪರ್ವತವನ್ನು ಸಿರ್ಯೋನ್ ಎಂದು ಕರೆಯುವರು. ಆದರೆ ಅಮೋರಿಯರು ಅದನ್ನು ಸೆನೀರ್ ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೆರ್ಮೋನಿಗೆ ಸೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:9
9 ತಿಳಿವುಗಳ ಹೋಲಿಕೆ  

ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.


ಮನಸ್ಸೆಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್‍ಗಿರಿ ಇವುಗಳವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸಿದರು; ಅವರು ಅನೇಕಜನರು.


ಸೆನೀರಿನ ತುರಾಯಿಮರದಿಂದ ನಿನ್ನ ಪಕ್ಕಗಳ ಹಲಿಗೆಗಳನ್ನು ಮಾಡಿ ನಿನ್ನ ಸ್ತಂಭವನ್ನು ರಚಿಸುವದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.


ಎನ್ನೊಂದಿಗೆ ಲೆಬನೋನಿನಿಂದ ಬಾ! ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳು, ಸಿಂಹಗಳ ಗವಿಗಳು, ಚಿರತೆಗಳ ಗುಡ್ಡಗಳು, ಇವುಗಳಿಂದ ಹೊರಟು ಬಾ!


ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ದಕ್ಷಿಣೋತ್ತರದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್ ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿಮಾಡುತ್ತವೆ.


ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ತಗ್ಗಿನಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.


ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೊನ್ ಪರ್ವತ, ವಿುಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು