Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:1 - ಕನ್ನಡ ಸತ್ಯವೇದವು J.V. (BSI)

1 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:1
25 ತಿಳಿವುಗಳ ಹೋಲಿಕೆ  

ನೋಡಿರಿ; ನಾನು ಜೀವಶುಭಗಳನ್ನೂ ಮರಣಾಶುಭಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.


ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.


ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ಚಿತ್ತಭ್ರಮಣೆ, ಕುರುಡತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸಲು


ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿ


ಪರಲೋಕದಲ್ಲಿರುವ ನೀನು ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ಪಿತೃಗಳಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.


ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.


ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು