Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:18 - ಕನ್ನಡ ಸತ್ಯವೇದವು J.V. (BSI)

18 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇತರ ದೇವರುಗಳನ್ನು ಪೂಜಿಸಿ ಅವಲಂಭಿಸಿದರೆ ನೀವು ಸ್ವಾಧೀನಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನಾಶವಾಗುವಿರಿ. ನಿಮ್ಮನ್ನು ನಾನು ಎಚ್ಚರಿಸುತ್ತಿದ್ದೇನೆ. ನೀವು ಯೆಹೋವನಿಗೆ ವಿಮುಖರಾದರೆ, ನಿಮಗಾಗಿ ತೆಗೆದುಕೊಳ್ಳಲು ನೀವು ಪ್ರವೇಶಿಸುತ್ತಿರುವ ಜೋರ್ಡನ್ ನದಿಯ ಆಚೆ ದಡದಲ್ಲಿರುವ ದೇಶದಲ್ಲಿ ನೀವು ಬಹುಕಾಲದವರೆಗೆ ಜೀವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:18
10 ತಿಳಿವುಗಳ ಹೋಲಿಕೆ  

ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.


ನೀವು ಆತನನ್ನು ಹಿಂಬಾಲಿಸದೆ ನಡೆಯುವ ಕಾರಣ ಆತನು ಈ ಜನರನ್ನು ಅರಣ್ಯದಲ್ಲಿ ಇನ್ನೂ ಇರಿಸಿದರೆ ಈ ಸಮಸ್ತಜನಾಂಗದ ನಾಶಕ್ಕೆ ನೀವೇ ಕಾರಣರಾಗುವಿರಿ ಎಂದು ಹೇಳಿದನು.


ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ ಇತರ ದೇವರುಗಳನ್ನು ಪೂಜಿಸಿ ಸೇವಿಸಿದರೆ


ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು