Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:20 - ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:20
39 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆತನು ನಮ್ಮನ್ನು ಜೀವದಿಂದುಳಿಸಿ ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಯೆಹೋವನನ್ನೇ ಹೊಂದಿಕೊಂಡಿರ್ರಿ.


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ, ಮತ್ತು ನಿನಗೆ ಮೇಲಾಗುವದು.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಿಮ್ಮ ದೇವರಾದ ಯೆಹೋವನನ್ನು ಹೊಂದಿಕೊಂಡವರಾದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳಿದ ಮಾರ್ಗದಲ್ಲಿ ನಡೆದು ಆತನ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಆದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ


ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲ್ಯರೆಲ್ಲರಿಗೆ ತಿಳಿಸಿದನು.


ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವದರಿಂದಲೇ ಬಹುಕಾಲ ಇರುವಿರಿ ಎಂದು ಹೇಳಿದನು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ನೀವೂ ನಿಮ್ಮ ಪುತ್ರಪೌತ್ರಾದಿಸಂತತಿಯವರೂ ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ನಾನು ಈಗ ಬೋಧಿಸುವ ಆತನ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕೆಂದೂ ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ಹೀಗಿರುವದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು