ಧರ್ಮೋಪದೇಶಕಾಂಡ 30:5 - ಕನ್ನಡ ಸತ್ಯವೇದವು J.V. (BSI)5 ನಿಮ್ಮ ಪಿತೃಗಳಿಗೆ ಸ್ವಾಸ್ತ್ಯವಾಗಿದ್ದ ದೇಶದಲ್ಲಿ ಸೇರಿಸಿ ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಮೇಲನ್ನುಂಟುಮಾಡಿ ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮ ಪಿತೃಗಳಿಗೆ ಸ್ವಂತವಾಗಿದ್ದ ನಾಡಿನಲ್ಲಿ ಸೇರಿಸುವರು. ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಒಳಿತನ್ನುಂಟುಮಾಡುವರು; ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.