ಧರ್ಮೋಪದೇಶಕಾಂಡ 31:17 - ಕನ್ನಡ ಸತ್ಯವೇದವು J.V. (BSI)17 ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.