Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:3 - ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:3
19 ತಿಳಿವುಗಳ ಹೋಲಿಕೆ  

ಆದದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶ ಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.


ಸೇವಕನಾದ ಮೋಶೆ ಸತ್ತನು; ನೀನು ಈಗ ಎದ್ದು ಸಮಸ್ತ ಪ್ರಜಾಸಹಿತವಾಗಿ ಈ ಯೊರ್ದನ್ ಹೊಳೆಯನ್ನು ದಾಟಿ ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶಕ್ಕೆ ಹೋಗು.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.


ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.


ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.


ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟದರಿಂದ ಅವನು ಜ್ಞಾನವರ ಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲ್ಯರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.


ಇಸ್ರಾಯೇಲನು ಯೋಸೇಫನಿಗೆ - ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ದೇಶಕ್ಕೆ ತಿರಿಗಿ ಬರಮಾಡುವನು.


ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.


ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು; ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಅವನು ಒಂದನ್ನೂ ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು