ಧರ್ಮೋಪದೇಶಕಾಂಡ 31:6 - ಕನ್ನಡ ಸತ್ಯವೇದವು J.V. (BSI)6 ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.” ಅಧ್ಯಾಯವನ್ನು ನೋಡಿ |