Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:1 - ಕನ್ನಡ ಸತ್ಯವೇದವು J.V. (BSI)

1 ಆಕಾಶಮಂಡಲವೇ, ನಾನು ಹೇಳುವದನ್ನು ಕೇಳು: ಭೂಮಂಡಲವೇ, ನನ್ನ ಮಾತುಗಳಿಗೆ ಕಿವಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆಕಾಶವೇ, ನಾನು ಹೇಳುವುದನ್ನು ಕೇಳು. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:1
12 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ದೇಶವೇ, ದೇಶವೇ, ದೇಶವೇ, ಯೆಹೋವನ ಮಾತನ್ನು ಕೇಳು!


ಸಕಲ ದೇಶಗಳವರೇ, ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕಿವಿಗೊಡಿರಿ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ನೇವಿುಸುತ್ತಾನೆ.


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರೋಧವಾಗಿ ಸಾಕ್ಷಿಗಳಾಗುವದಕ್ಕೆ ಭೂಮ್ಯಾಕಾಶಗಳನ್ನು ಕರೆಯುವೆನು.


ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;


ಆಕಾಶ ಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು ಎಂದು ಯೆಹೋವನು ನುಡಿಯುತ್ತಾನೆ.


ಆಗ ಮೋಶೆ ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು; ಏನಂದರೆ -


ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ.


ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲ್ಯರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲ್ಯರಿಗೆ ವಿರೋಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿ ಪಾಠಮಾಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು