ಧರ್ಮೋಪದೇಶಕಾಂಡ 32:14 - ಕನ್ನಡ ಸತ್ಯವೇದವು J.V. (BSI)14 ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ. ಅಧ್ಯಾಯವನ್ನು ನೋಡಿ |