Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:16 - ಕನ್ನಡ ಸತ್ಯವೇದವು J.V. (BSI)

16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:16
20 ತಿಳಿವುಗಳ ಹೋಲಿಕೆ  

ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಅವುಗಳಿಗೆ ಅಡ್ಡ ಬೀಳಲೂಬಾರದು, ಪೂಜೆಮಾಡಲೂಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಹೇಸಿಗೆಯಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು.


ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು;


ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು;


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು