ಧರ್ಮೋಪದೇಶಕಾಂಡ 32:2 - ಕನ್ನಡ ಸತ್ಯವೇದವು J.V. (BSI)2 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು. ಅಧ್ಯಾಯವನ್ನು ನೋಡಿ |