ಧರ್ಮೋಪದೇಶಕಾಂಡ 32:20 - ಕನ್ನಡ ಸತ್ಯವೇದವು J.V. (BSI)20 ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು - ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಮಾಡದವರೂ ದ್ರೋಹಿಗಳಾದ ಮಕ್ಕಳೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ. ಅಧ್ಯಾಯವನ್ನು ನೋಡಿ |