Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:21 - ಕನ್ನಡ ಸತ್ಯವೇದವು J.V. (BSI)

21 ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:21
31 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳುಕೊಳ್ಳಲಿಲ್ಲವೇನು ಎಂದು ಕೇಳುತ್ತೇನೆ. ಈ ವಿಷಯದಲ್ಲಿ - ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡುಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.


ಆ ವಚನವೇನಂದರೆ - ನನ್ನ ಜನವಲ್ಲದ್ದನ್ನು ನನ್ನ ಜನವೆಂದೂ ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.


ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು.


ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಸುಳ್ಳುವಿಗ್ರಹಗಳನ್ನು ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ನಾನು ಮಾತಾಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮ ವರವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.


ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು;


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ.


ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು