Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:22 - ಕನ್ನಡ ಸತ್ಯವೇದವು J.V. (BSI)

22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:22
42 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ನಿನ್ನ ಶತ್ರುಗಳ ಕೈಗೆ ಕೊಟ್ಟು ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವದು.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ಬೆಂಕಿಗೆ ಕರಗಿದ ಮೇಣದಂತೆಯೂ ಜರಿಯಲ್ಲಿ ಹೊಯ್ದ ನೀರಿನ ಹಾಗೂ ಪರ್ವತಗಳು ಆತನ ಹೆಜ್ಜೆಗೆ ಕರಗಿ ಹರಿಯುತ್ತವೆ, ತಗ್ಗುಗಳು ಸೀಳಿಹೋಗುತ್ತವೆ.


ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.


ನೀನು ಬಹಳವಾಗಿ ಕನಿಕರಿಸಿ ನನ್ನ ಪ್ರಾಣವನ್ನು ಪಾತಾಳತಲದಿಂದ ತಪ್ಪಿಸಿದ್ದೀಯಲ್ಲಾ.


ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ಎರಡು ಕಣ್ಣುಳ್ಳವನಾಗಿದ್ದು ಅಗ್ನಿ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ಜೀವದಲ್ಲಿ ಸೇರುವದು ನಿನಗೆ ಉತ್ತಮ.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತವೆ; ಅತಿವೃಷ್ಟಿಯು ಹೊಯ್ದುಕೊಂಡು ಹೋಗುತ್ತದೆ; ಸಾಗರವು ಆರ್ಭಟಿಸಿ ಕೈಗಳನ್ನು ಮೇಲಕ್ಕೆತ್ತುತ್ತದೆ.


ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋವಿುನವರೆಲ್ಲರನ್ನೂ ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದಿಂದುರಿಯುತ್ತಾ ಶಪಿಸೇ ಶಪಿಸಿದ್ದೇನೆ;


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ ಸುತ್ತುಮುತ್ತಲೂ ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿ ಬಿಟ್ಟಿದ್ದಾನೆ.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ; ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆ ಹಾಯುವವು.


ಬೆಂಕಿಯು ಆತನ ಮುಂಗಡೆಯಿಂದ ಹೋಗಿ ಸುತ್ತಲೂ ಆತನ ವೈರಿಗಳನ್ನು ದಹಿಸಿ ಬಿಡುತ್ತದೆ.


ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು


ಆದದರಿಂದ ಭೂವಿುಯು ಮಾರ್ಪಟ್ಟರೂ ಬೆಟ್ಟಗಳು ಸಮುದ್ರದಲ್ಲಿ ಮುಣುಗಿಹೋದರೂ ನಮಗೇನೂ ಭಯವಿಲ್ಲ.


ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವದು; ನಿಮ್ಮ ಭೂವಿುಯಲ್ಲಿ ಬೆಳೆಯಾಗುವದಿಲ್ಲ, ತೋಟಗಳ ಮರಗಳು ಫಲಿಸುವದಿಲ್ಲ.


ಅವರು ಸಜೀವಿಗಳಾಗಿ ತಮ್ಮ ಸರ್ವಸ್ವವು ಸಹಿತ ಪಾತಾಳಕ್ಕೆ ಹೋಗಿಬಿಟ್ಟರು; ಭೂವಿುಯು ಅವರನ್ನು ಮುಚ್ಚಿಕೊಂಡಿತು.


ನಾನು ರೋಷಾವಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ - ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಅದ್ಭುತಕಂಪನವಾಗುವದು ಖಂಡಿತ;


ಕರ್ತನಾದ ಯೆಹೋವನು ಇನ್ನೊಂದನ್ನು ನನಗೆ ತೋರಿಸಿದನು - ಆಹಾ, ಕರ್ತನಾದ ಯೆಹೋವನು ತನ್ನ ಪಕ್ಷವಾಗಿ ವ್ಯಾಜ್ಯವಾಡುವದಕ್ಕೆ ಅಗ್ನಿಯನ್ನು ಕರೆದನು.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ ವಿರೋಧಿಯಂತೆ ಬಲಗೈಯೆತ್ತಿ ನಿಂತು ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಕೂಡಿಸಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.


ಯೆಹೋವನ ಕಡೆಗೆ ತಿರುಗಿಕೊಳ್ಳಿರಿ, ಬದುಕುವಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ನುಗ್ಗಿಯಾನು; ನುಂಗುವ ಆತನ ರೋಷಾಗ್ನಿಯನ್ನು ಆರಿಸುವದಕ್ಕೆ ಬೇತೇಲಿನಲ್ಲಿ ಯಾರೂ ಇರರು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು