ಧರ್ಮೋಪದೇಶಕಾಂಡ 32:25 - ಕನ್ನಡ ಸತ್ಯವೇದವು J.V. (BSI)25 ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು. ಅಧ್ಯಾಯವನ್ನು ನೋಡಿ |