ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.
ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.
ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -
ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.