Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:8 - ಕನ್ನಡ ಸತ್ಯವೇದವು J.V. (BSI)

8 ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:8
23 ತಿಳಿವುಗಳ ಹೋಲಿಕೆ  

ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ಪರಾತ್ಪರನ ಮರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಅವನ ತಮ್ಮನ ಹೆಸರು ಯೊಕ್ತಾನ್.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುವೆನು ಅಂದುಕೊಂಡಿದ್ದೆಯಲ್ಲಾ!


ನೀವು ದೇವರುಗಳು, ಎಲ್ಲರೂ ಪರಾತ್ಪರನ ಮಕ್ಕಳು ಎಂದು ನಾನು ಹೇಳಿದೆನು.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ಮನೋದೃಷ್ಟಿಯಿಂದ ನೋಡುವ ಪುರುಷನಿಗೆ ಬಂದ ದೇವೋಕ್ತಿ, ದೇವರ ಮಾತುಗಳನ್ನು ಕೇಳುವವನೂ ಪರಾತ್ಪರನ ಜ್ಞಾನವನ್ನು ಪಡೆದವನೂ ಪರವಶವಾಗಿ ಕಣ್ಣುತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನಿಗುಂಟಾದ ದೇವೋಕ್ತಿ.


ಬೆಟ್ಟದ ಶಿಖರದಿಂದ ನಾನು ಅವರನ್ನು ಕಂಡೆನು; ಗುಡ್ಡದಿಂದ ಅವರನ್ನು ನೋಡಿದೆನು. ಆ ಜನಾಂಗವು ತಾನು ಇತರ ಜನಾಂಗಗಳಂತಲ್ಲವೆಂದು ಭಾವಿಸಿಕೊಂಡು ಪ್ರತ್ಯೇಕವಾಗಿ ವಾಸಿಸುತ್ತದೆ.


ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.


ಭೂವಿುಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಶೀತೋಷ್ಣಕಾಲಗಳನ್ನು ನೇವಿುಸಿದವನು ನೀನು.


ಹೀಗಿರಲು ಯೆಹೋವನ ಸಭೆಯವರ ಭೂವಿುಯ ಮೇಲೆ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವದಿಲ್ಲ.


ದೇಶಭಾಷಾ ಕುಲಜನಾಂಗಗಳ ಪ್ರಕಾರ [ಇವರೇ ಯೆಫೆತನ ವಂಶದವರು].


ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ಇದೇ ಸಂಗತಿಯನ್ನು ತಮ್ಮ ಪಿತೃಗಳಿಂದ ಕೇಳಿ ಮರೆಮಾಜದೆ ಪ್ರಕಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು