Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:14 - ಕನ್ನಡ ಸತ್ಯವೇದವು J.V. (BSI)

14 ವರುಷ ವರುಷಕ್ಕೂ ತಿಂಗಳು ತಿಂಗಳಿಗೂ ಆಗುವ ಬೆಳೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೂರ್ಯನಿಂದ ಫಲಿಸುವ ಪಸಲುಗಳಿಂದ ತಿಂಗಳು ತಿಂಗಳು ಆಗುವ ಬೆಳೆಗಳಿಂದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೂರ್ಯನು ಅವರಿಗೆ ಒಳ್ಳೆಯ ಫಲಗಳನ್ನು ಕೊಡಲಿ; ಪ್ರತಿ ತಿಂಗಳು ಒಳ್ಳೆಯ ಫಲಗಳನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸೂರ್ಯನು ತರುವ ಉತ್ಕೃಷ್ಟವಾದವುಗಳಿಂದಲೂ ಚಂದ್ರನು ದಯಪಾಲಿಸುವ ಅಮೂಲ್ಯವಾದವುಗಳಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:14
15 ತಿಳಿವುಗಳ ಹೋಲಿಕೆ  

ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿದ್ದೀ; ಸೂರ್ಯನು ತನ್ನ ಅಸ್ತಮಾನಸಮಯವನ್ನು ಬಲ್ಲನು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಹಗಲಿರುಳುಗಳಿಗೆ ನಿಯಾಮಕನು ನೀನು; ಸೂರ್ಯಾದಿ ಜ್ಯೋತಿರ್ಮಂಡಲಗಳ ನಿರ್ಮಾಣಕನು ನೀನು.


ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡುವಾಗ -


ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ ಮೋಡಗಳನ್ನು ಚದರಿಸಿಬಿಟ್ಟು ಮಳೆಬಿದ್ದ ಭೂವಿುಯಿಂದ ಹುಲ್ಲನ್ನು ಮೊಳಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.


ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೇ ಬೆಳೆಯನ್ನು ಕೊಡುವವು, ತೋಟದ ಮರಗಳು ಬಹಳ ಫಲಕೊಡುವವು;


ಯೋಸೇಫ್ ಕುಲಗಳ ವಿಷಯದಲ್ಲಿ ಹೇಳಿದ್ದೇನಂದರೆ - ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,


ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು