Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:20 - ಕನ್ನಡ ಸತ್ಯವೇದವು J.V. (BSI)

20 ಗಾದ್ ಕುಲದವರ ವಿಷಯದಲ್ಲಿ ಹೀಗಂದನು - ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು [ಶತ್ರುಗಳ] ಭುಜವನ್ನೂ ಶಿರಸ್ಸನ್ನೂ ಮುರಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಗಾದ್ ಕುಲ ಕುರಿತು ಮೋಶೆ ನುಡಿದದ್ದು: “ಗಾದ್ಯರ ಪ್ರಾಂತ್ಯವನು ವಿಸ್ತರಿಸಿದ ಸರ್ವೇಶ್ವರನಿಗೆ ಸ್ತೋತ್ರವು! ಸಿಂಹದಂತೆ ಹೊಂಚುಹಾಕಿ ಮುರಿವನು ಗಾದನು ಶತ್ರುಗಳ ಭುಜವನು, ಶಿರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ: “ಗಾದನ ರಾಜ್ಯವನ್ನು ವಿಸ್ತಾರ ಮಾಡಿದ ದೇವರು ಸ್ತುತಿಹೊಂದಲಿ. ಅವನು ಸಿಂಹದಂತೆ ಜೀವಿಸಿ ತೋಳನ್ನೂ ಶಿರಸ್ಸನ್ನೂ ಮುರಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:20
14 ತಿಳಿವುಗಳ ಹೋಲಿಕೆ  

ಗಾದನ ಸಂಗತಿ - ಸುಲಿಗೆಮಾಡುವವರು ದಂಡೆತ್ತಿ ಅವನ ಮೇಲೆ ಬೀಳಲು ಇವನು ಅವರನ್ನು ಹಿಮ್ಮೆಟ್ಟಿಕೊಂಡು ಹೋಗುವನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದ್ದರಿಂದ ನನ್ನ ಹರಡುಗಳು ಕದಲುವದಿಲ್ಲ.


ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸನಾದ ಸೀಹೋನನ ವಶದಲ್ಲಿದ್ದು ಅಮ್ಮೋನಿಯರ ಮೇರೆಯ ಈಚೆಗಿದ್ದಂಥ ಎಲ್ಲಾ ಪಟ್ಟಣಗಳು,


ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -


ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು?


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು