Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:23 - ಕನ್ನಡ ಸತ್ಯವೇದವು J.V. (BSI)

23 ನಫ್ತಾಲಿಕುಲದ ವಿಷಯದಲ್ಲಿ ಹೀಗಂದನು - ನಫ್ತಾಲಿಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತವಾದಿ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. [ಕಿನ್ನೆರೆತ್] ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಫ್ತಾಲಿ ಕುಲದ ವಿಷಯದಲ್ಲಿ, “ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, ದೇವರ ಆಶೀರ್ವಾದದಿಂದ ತುಂಬಿದವನೇ; ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:23
10 ತಿಳಿವುಗಳ ಹೋಲಿಕೆ  

ನಫ್ತಾಲಿ ಬಿಡಿಸಿಕೊಂಡಿರುವ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುತ್ತವೆ.


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ಉದಯದಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ಆಶೇರ್ ಕುಲದ ವಿಷಯದಲ್ಲಿ ಹೀಗಂದನು - ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು